ಮಂಗಳೂರು: ವಿದೇಶದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಕೇರಳದ ಕೋಜಿಕ್ಕೋಡ್ ಮೂಲದ ಪಿ.ಕೆ. ಶಮೀರ್ ಎಂಬುವನನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ಬಪ್ಪನಾಡು ಸಮೀಪ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನ ಬಳಿ ಇದ್ದ 73 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದೆ. ಮಂಗಳೂರು, ಕೇರಳಕ್ಕೆ ಪಿ.ಕೆ. ಶಮೀರ್ ಗಾಂಜಾ ಪೂರೈಕೆ ಮಾಡುತ್ತಿದ್ದ. ಘಟನೆ ಸಂಬಂಧ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.