
ಬೆಂಗಳೂರು: ಪ್ರತ್ಯೇಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಮಮೂರ್ತಿ ನಗರ, ಬಸವನಗುಡಿ, ಸಂಪಿಗೆಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಫ್ರೇಜರ್ ಟೌನ್ ನಿವಾಸಿ ವಾಸೀಂ ಪಾಶಾ, ರಾಮಮೂರ್ತಿ ನಗರ ನಿವಾಸಿ ಹರೀಶ್ ಅವರನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಲಕ್ಷ ರೂಪಾಯಿ ಮೌಲ್ಯದ 2 ಕೆಜಿ ಮಾಡಲಾಗಿದೆ. ಕೆಆರ್ ಪುರಂ ರೈಲ್ವೆ ನಿಲ್ದಾಣದ ಬಳಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಶಾಮಣ್ಣ ಗಾರ್ಡನ್ ಬಾಪೂಜಿನಗರದ ಅರ್ಬಾದ್ ಶೇಖ್(29) ಎಂಬುವನನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದು, ಮೂರೂವರೆ ಕೆಜಿ ಗಾಂಜಾ, ಮೊಬೈಲ್ ಹಾಗೂ ಕೃತ್ಯಕ್ಕೆ ಬಳಕೆ ಮಾಡಿದ್ದ ಆಟೋ ಜಪ್ತಿ ಮಾಡಿದ್ದಾರೆ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಜೆಬಿಜೆ ಮೈದಾನದ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ತಜ್ಮುಲ್ ಶರೀಫ್(32) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.