ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಬೆಂಗಳೂರಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಬಿಎಂಟಿಸಿ ಇಬ್ಬರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ವಿಠಲ ಭಜಂತ್ರಿ ಮತ್ತು ಶರಣಬಸಪ್ಪ ಬಂಧಿತ ಆರೋಪಿಗಳೆಂದು ಹೇಳಲಾಗಿದ್ದು, ಅವರಿಂದ 9.8 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ವಿಠಲ ಭಜಂತ್ರಿ ಬಿಎಂಟಿಸಿಯಲ್ಲಿ ಚಾಲಕ ಕಂ ನಿರ್ವಾಹಕನಾಗಿದ್ದಾನೆ. ಶರಣಬಸಪ್ಪ ಡಿಪೋ ನೌಕರನಾಗಿದ್ದಾನೆ. ಕೆಂಗೇರಿಯಲ್ಲಿ ಕುಟುಂಬದವರೊಂದಿಗೆ ಇವರು ವಾಸವಾಗಿದ್ದಾರೆ. ಬಿಎಂಟಿಸಿ ನೌಕರರರಾಗಿರುವುದರಿಂದ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಇದೆ. ಈ ಸೌಲಭ್ಯ ದುರ್ಬಳಕೆ ಮಾಡಿಕೊಂಡ ಇವರು ವಿಜಯಪುರ, ಕಲ್ಬುರ್ಗಿ ಮೊದಲಾದ ಕಡೆಗಳಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.