alex Certify ಗಾಂಜಾ ಮಾರಾಟ ಮಾಡುವಾಗಲೇ ಪೊಲೀಸ್ ದಾಳಿ: 5 ಮಂದಿ ಅರೆಸ್ಟ್; ಅಪಾರ ಪ್ರಮಾಣದ ಗಾಂಜಾ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಂಜಾ ಮಾರಾಟ ಮಾಡುವಾಗಲೇ ಪೊಲೀಸ್ ದಾಳಿ: 5 ಮಂದಿ ಅರೆಸ್ಟ್; ಅಪಾರ ಪ್ರಮಾಣದ ಗಾಂಜಾ ವಶಕ್ಕೆ

ಶಿವಮೊಗ್ಗ: ಎರಡು ಪ್ರತ್ಯೇಕ ದಾಳಿ ನಡೆಸಿರುವ ಶಿವಮೊಗ್ಗ ಜಿಲ್ಲಾ ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿ ಅಪಾರ ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. NDPS ಕಾಯ್ದೆಯನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.

ಶಿವಮೊಗ್ಗದ ಹೊಸಮನೆ ರಸ್ತೆಯಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದೊಡ್ಡಪೇಟೆ ಪಿಎಸ್ಐ ಮತ್ತು ಸಿಬ್ಬಂದಿ ದಾಳಿ ಮಾಡಿದ್ದಾರೆ. ದಾಳಿಯವೇಳೆ ಉಮೇಶ್ ನಾಯ್ಕ(48), ನಿತಿನ್(23), ರಾಹಿಲ್ ಖಾನ್(23, ಶ್ರೇಯಸ್(25), ನಿತಿನ್ ಕುಮಾರ್(26) ಅವರನ್ನು ದಸ್ತಗಿರಿ ಮಾಡಲಾಗಿದ್ದು, ಆರೋಪಿಗಳಿಂದ 70 ಸಾವಿರ ರೂಪಾಯಿ ಮೌಲ್ಯದ ಒಂದು ಕೆಜಿ 100ಗ್ರಾಂ ಗಾಂಜಾ, 3670 ರೂಪಾಯಿ ನಗದು, ಒಂದು ಬೈಕ್ ವಶಕ್ಕೆ ಪಡೆದುಕೊಳ್ಳಲಾಗಿದೆ.

ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಟ್ ಪಟ್ ನಗರದಲ್ಲಿ ಮಾದಕ ವಸ್ತುಗಳ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಂದಿರಾನಗರ ಮೊಹಮ್ಮದ್ ಅರ್ಷಾನ್(23) ವಶಕ್ಕೆ ಪಡೆದ ಪೊಲೀಸರು 8000 ರೂಪಾಯಿ ಮೌಲ್ಯದ 420 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...