alex Certify ಕಸದ ವಾಸನೆಯಿಂದ ಕಂಗೆಟ್ಟಿದ್ದ ಜನತೆಗೆ ಕೊಂಚ ನಿಟ್ಟುಸಿರು; ತ್ಯಾಜ್ಯ ವಿಲೇವಾರಿ ಘಟಕಗಳ ಸ್ಥಳಾಂತರಕ್ಕೆ ನಿರ್ಧಾರ; ಡಿಸಿಎಂ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಸದ ವಾಸನೆಯಿಂದ ಕಂಗೆಟ್ಟಿದ್ದ ಜನತೆಗೆ ಕೊಂಚ ನಿಟ್ಟುಸಿರು; ತ್ಯಾಜ್ಯ ವಿಲೇವಾರಿ ಘಟಕಗಳ ಸ್ಥಳಾಂತರಕ್ಕೆ ನಿರ್ಧಾರ; ಡಿಸಿಎಂ ಮಾಹಿತಿ

ಬೆಂಗಳೂರು: ಯಶವಂತಪುರ ವಿಧಾನಸಭೆ ಕ್ಷೇತ್ರದ 5 ಕಸ ವಿಲೇವಾರಿ ಘಟಕ, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಸ ವಿಲೇವಾರಿ ಘಟಕಗಳ ಸ್ಥಳಾಂತರಕ್ಕೆ ಪರ್ಯಾಯ ಜಾಗಗಳನ್ನು ಗುರುತಿಸಲಾಗುತ್ತಿದೆ. ಈ ಬಗ್ಗೆ ಕಂದಾಯ ಹಾಗೂ ಅರಣ್ಯ ಇಲಾಖೆಗಳ ಜತೆ ಚರ್ಚಿಸಲಾಗಿದೆ ಎಂದರು.

ಬೆಂಗಳೂರು ಅಪಾರವಾಗಿ ಬೆಳದ ಪರಿಣಾಮ ಕಸ ವಿಲೇವಾರಿ ಘಟಕಗಳು ನಗರದ ಹೃದಯ ಭಾಗಕ್ಕೆ ಬಂದಿವೆ. ಈ ಘಟಕಗಳ ಸುತ್ತಮುತ್ತ ನಾಲ್ಕೈದು ಕಿ.ಮೀ. ವರೆಗೆ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಬ್ಯಾಟರಾಯನಪುರ ಶಾಸಕ, ಸಚಿವ ಕೃಷ್ಣಬೈರೇಗೌಡ, ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತಿತರರು ಅವರು ಕಸ ವಿಲೇವಾರಿ ಘಟಕ ಸ್ಥಳಾಂತರದ ವಿಚಾರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ನಾನು ಖುದ್ದು ಸ್ಥಳ ಪರಿಶೀಲನೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಜನರಿಗೆ ಕಸದ ವಾಸನೆ ಬರಬಾರದು ಎಂಬ ಉದ್ದೇಶದಿಂದ ನಗರದ ಹೊರವಲಯಕ್ಕೆ ಈ ಘಟಕಗಳ ಸ್ಥಳಾಂತರಕ್ಕೆ ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

ಕಸ ವಿಲೇವಾರಿಗಾಗಿ ಬೆಂಗಳೂರು ನಗರದ ನಾಲ್ಕೂ ಮೂಲೆಗಳಲ್ಲಿ ಅರಣ್ಯ ಪ್ರದೇಶದ ಗಡಿ ಭಾಗಗಳಲ್ಲಿ 100 ಎಕರೆ ಜಾಗ ನೀಡಿ ಎಂದು ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಮನವಿ ಮಾಡಿದ್ದು, ಸರ್ವೇ ಮಾಡಿದ ಬಳಿಕ ಜಾಗ ನೀಡಲಾಗುವುದು ಎಂದು ತಿಳಿಸಿದ್ದಾರೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...