ಹಲವಾರು ರೋಗಗಳಿಗೆ ರಾಮಬಾಣ ವಾಗಿರುವ ಬೆಳ್ಳುಳ್ಳಿಯನ್ನು ಹಸಿಯಾಗಿ ಸೇವಿಸಿದರೂ, ಅಡುಗೆಯಲ್ಲಿ ಬಳಸಿದರೂ ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಹೃದಯ ಸಂಬಂಧಿ ರೋಗಗಳಿಂದ ದೂರವಿರಬಹುದು. ಕೊಲೆಸ್ಟ್ರಾಲ್ ಇಳಿಕೆಗೆ ಇದು ಸಹಾಯ ಮಾಡುತ್ತದೆ. ಮಧುಮೇಹಿಗಳು ದಿನನಿತ್ಯ ಒಂದು ಬೆಳ್ಳುಳ್ಳಿ ತಿನ್ನುವುದರಿಂದ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಬಹುದು.
ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಬೊಜ್ಜು ನಿವಾರಕವಾಗಿಯೂ ಇದು ಕೆಲಸ ಮಾಡುತ್ತದೆ.
ಮಕ್ಕಳಿಗೆ ಸ್ಮರಣ ಶಕ್ತಿಯನ್ನು ಹೆಚ್ಚಿಸುವ ವಿಶೇಷ ಗುಣ ಇದರಲ್ಲಿದೆ. ಹೀಗಾಗಿ ದಿನನಿತ್ಯ ಆಹಾರದ ರೂಪದಲ್ಲಿ ದಿನಕ್ಕೊಂದು ಬೆಳ್ಳುಳ್ಳಿ ಕೊಡಿ.