alex Certify ಹತ್ತಾರು ಕಾಯಿಲೆಗಳನ್ನು ಗುಣಪಡಿಸಬಲ್ಲದು ಬೆಳ್ಳುಳ್ಳಿ ಚಹಾ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹತ್ತಾರು ಕಾಯಿಲೆಗಳನ್ನು ಗುಣಪಡಿಸಬಲ್ಲದು ಬೆಳ್ಳುಳ್ಳಿ ಚಹಾ…!

ಶುಂಠಿ ಚಹಾ, ಪುದೀನಾ ಟೀ ಹೀಗೆ ವಿವಿಧ ಬಗೆಯ ಪಾನೀಯಗಳ ಬಗ್ಗೆ ನಾವೆಲ್ಲ ಕೇಳಿದ್ದೇವೆ. ಆದರೆ ಬೆಳ್ಳುಳ್ಳಿ ಚಹಾದ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ. ಬೆಳ್ಳುಳ್ಳಿ ಟೀ ಕುಡಿಯುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ. ಈ ಚಹಾವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಬೆಳ್ಳುಳ್ಳಿ ಎಂಟಿಬ್ಯಾಕ್ಟೀರಿಯಲ್ ಮತ್ತು ಎಂಟಿವೈರಲ್ ಗುಣಗಳನ್ನು ಹೊಂದಿದೆ. ಬೆಳ್ಳುಳ್ಳಿ ಚಹಾಕ್ಕೆ ಸ್ವಲ್ಪ ಶುಂಠಿ ಮತ್ತು ದಾಲ್ಚಿನ್ನಿ ಸೇರಿಸಬಹುದು.

ಇದರಿಂದ ಅದರ ಪ್ರಯೋಜನ ದುಪ್ಪಟ್ಟಾಗುತ್ತದೆ. ಚಹಾದ ರುಚಿ ಸಹ ಹೆಚ್ಚಾಗುತ್ತದೆ. ಬೆಳ್ಳುಳ್ಳಿ ಟೀ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ದೇಹದಲ್ಲಿನ ಸಕ್ಕರೆ ಅಂಶ ಕಡಿಮೆಯಾಗುತ್ತದೆ. ಇದು ಚಯಾಪಚಯಕ್ಕೂ ಸಹ ಸಹಾಯ ಮಾಡುತ್ತದೆ. ಬೆಳ್ಳುಳ್ಳಿ ಟೀ ಸೇವನೆ ಮೂಲಕ ದೇಹವನ್ನು ಡಿಟಾಕ್ಸ್‌ ಮಾಡಬಹುದು. ಇದು ನಮ್ಮ ತೂಕ ಕಡಿಮೆ ಮಾಡುವಲ್ಲಿ ಕೂಡ ಸಹಕಾರಿ.

ಈ ಚಹಾವು ದೇಹದ ಬಹುತೇಕ ಭಾಗಗಳಲ್ಲಿ ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ. ಏಕೆಂದರೆ ಚಯಾಪಚಯವನ್ನು ಹೆಚ್ಚಿಸುವ ಗುಣಗಳು ಇದರಲ್ಲಿ ಕಂಡುಬರುತ್ತವೆ, ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಬೆಳ್ಳುಳ್ಳಿ ಟೀ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಇದನ್ನು ಸೇವಿಸುವುದರಿಂದ ರಕ್ತ ಪರಿಚಲನೆ ಸುಲಭವಾಗುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಈ ಮೂಲಕ ಹೃದಯ ಸಂಬಂಧಿ ಕಾಯಿಲೆಗಳನ್ನು ದೂರವಿಡಬಹುದು.

ಬೆಳ್ಳುಳ್ಳಿ ಚಹಾವು ಉಸಿರಾಟದ ಕಾಯಿಲೆಗಳಿಂದ ರಕ್ಷಿಸುತ್ತದೆ. ಚಳಿಗಾಲದಲ್ಲಿ ಜ್ವರ ಮತ್ತು ಕೆಮ್ಮು ನಿವಾರಣೆಗೂ ಇದನ್ನು ಸೇವಿಸಬಹುದು. ಈ ಚಹಾವು ಶಕ್ತಿಯುತವಾದ ಪ್ರತಿಜೀವಕ ಪಾನೀಯವಾಗಿದೆ, ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಬೆಳ್ಳುಳ್ಳಿ ಟೀ ದೇಹದಿಂದ ಉರಿಯೂತವನ್ನು ಕಡಿಮೆ ಮಾಡುತ್ತದೆ.

ಬೆಳ್ಳುಳ್ಳಿ ಚಹಾವನ್ನು ತಯಾರಿಸುವುದು ಹೇಗೆ ?

ಪಾತ್ರೆಯೊಂದರಲ್ಲಿ ಒಂದು ಕಪ್ ನೀರನ್ನು ಕುದಿಸಿ. ನಾಲ್ಕಾರು ಬೆಳ್ಳುಳ್ಳಿ ಎಸಳುಗಳನ್ನು ಜಜ್ಜಿ ಅದಕ್ಕೆ ಸೇರಿಸಿ. ಚಿಟಿಕೆ ಕಾಳು ಮೆಣಸಿನ ಪುಡಿಯನ್ನೂ ಹಾಕಿ ಚಹಾವನ್ನು ಐದು ನಿಮಿಷಗಳ ಕಾಲ ಕುದಿಯಲು ಬಿಡಿ. ನಂತರ ಗ್ಯಾಸ್‌ ಆಫ್‌ ಮಾಡಿ ಚಹಾವನ್ನು ಫಿಲ್ಟರ್‌ ಮಾಡಿಕೊಂಡು ಕುಡಿಯಿರಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...