ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದ ಮಂಜನಾಡಿ ಗ್ರಾಮದ ಖಂಡಿಕೆ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ, ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡ ಪ್ರಕರಣದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ.
ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು ಇಡೀ ಮನೆ ಹೊತ್ತಿ ಉರಿದಿದ್ದು, ಮನೆಯೊಳಗಿದ್ದ ತಾಯಿ, ಖುಬ್ರಾ, ಅವರ ಮಕ್ಕಳಾದ ಮೆಹದಿಯಾ, ಮಾಯಿಝ, ಮಝಿಯಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಡಿಸೆಂಬರ್ 13ರಂದು ತಾಯಿ ಖುಬ್ರಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇಂದು ಬಾಲಕಿ ಮೆಹದಿಯಾ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮಾಯಿಝ, ಮಝಿಯಾ ಅವರಿಗೆ ಚಿಕಿತ್ಸೆ ಮುಂದುವರೆದಿದೆ.