ಕೊಪ್ಪಳ: ಗ್ಯಾಸ್ ಗೀಸರ್ ಸ್ಫೋಟಗೊಂಡ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಿಪೋ ಬಳಿಯ ಕಾಲೋನಿಯಲ್ಲಿ ನಡೆದಿದೆ.
ಗಾಯಾಳುಗಳನ್ನು ಕವಿತಾ, ಪ್ರೀತಿ, ಶೋಭಾ, ಶೃತಿ, ಭಾಗ್ಯಮ್ಮ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಕವಿತಾ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಗಂಗಾವತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.