ಮೈಸೂರು: ಮೈಸೂರಿನ ಹಳೆಕೆಸರೆಯ ಗುಜರಿ ಗೋದಾಮಿನಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಐವರು ಅಸ್ವಸ್ಥರಾಗಿದ್ದಾರೆ.
ಗೋದಾಮಿನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ವಿಷಕಾರಿ ಅನಿಲ ಸೋರಿಕೆಯಿಂದ ಅಸ್ವಸ್ಥರಾದ ಐವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಬಳಿಕ 5 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷಕಾರಿ ಅನಿಲ ಸೋರಿಕೆ ತಡೆದು ಮುಂಜಾಗ್ರತೆ ಕ್ರಮ ಕೈಗೊಂಡಿದ್ದಾರೆ.