![](https://kannadadunia.com/wp-content/uploads/2023/06/breaking-news-poster-design-template-d020bd02f944a333be71e17e3a38db24_screen-1.jpg)
ಧಾರವಾಡ: ಮನೆ ಮನೆಗಳಿಗೆ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಸೋರಿಕೆಯಾಗಿ ಬೆಂಕಿ ಅವಗಢ ಸಂಭವಿಸಿರುವ ಘಟನೆ ಧಾರವಾಡದ ರಜತಗಿರಿ ಬಡಾವಣೆಯಲ್ಲಿ ನಡೆದಿದೆ.
ಮನೆಗಳಿಗೆ ನೇರ ಸಂಪರ್ಕ ಕಲ್ಪಿಸುವ ಗ್ಯಾಸ್ ಪೈಪ್ ಲೈನ್ ಇದಾಗಿದ್ದು, ಬಡಾವಣೆಯಲ್ಲಿ ಪೈಪ್ ಲೈನ್ ನ ಎರಡು ಕಡೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಪೈಪ್ ಲೈನ್ ಮಾರ್ಗದುದ್ದಕ್ಕೂ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ.
ಸ್ಥಳೀಯ ನಿವಾಸಿಗಳು ಆತಂಕಕ್ಕೀಡಾಗಿ ಮನೆಗಳಿಂದ ಹೊರಗೋಡಿಬಂದಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.