
ಮೈಸೂರು: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ನಗರದ ಕೂರ್ಗಳ್ಳಿ ಬಳಿ ನಡೆದಿದೆ.
ಕೂರ್ಗಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಂದ್ರು ಹಾಗೂ ಪ್ರೇಮಾ ಮೃತ ದಂಪತಿಗಳು.
ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ವಿ.ವಿ.ಪುರಂ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.