
ಗ್ಯಾಸ್ ಟ್ಯಾಂಕರ್, ಕಾರು ಹಾಗೂ ಜೀಪಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಾರ್ ಜಿಲ್ಲೆಯಲ್ಲಿ ನಡೆದಿದೆ.
ಬದ್ನಾವರ್-ಉಜ್ಜಯನಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಎದುರಿನಿಂದ ಬರುತ್ತಿದ್ದ ಕಾರು ಹಾಗೂ ಜೀಪ್ ಗೆ ಡಿಕ್ಕಿ ಹೊಡೆದಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಧಾರ್ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ.
ಮೃತರು ಮಧ್ಯಪ್ರದೆಷದ ರತ್ನಂ, ಮಂದ್ಸೌರ್ ಹಾಗೂ ರಾಜಸ್ಥಾನದ ಜೋಧಪುರ ಮೂಲದವರು ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ನಾಲ್ವರು ಹಾಗೂ ಜೀಪ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.