ನವದೆಹಲಿ: ಗೌರವ್ ವಲ್ಲಭ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಗುರುವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದರು.
ಬಿಹಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅನಿಲ್ ಶರ್ಮಾ ಕೂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಈ ಮೂಲಕ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ವಲ್ಲಭ್, ತಮ್ಮ ನಿರ್ಗಮನ ನಿರ್ಧಾರದ ಹಿಂದೆ ಜಾತಿ ಜನಗಣತಿಯಂತಹ ಕಾರಣಗಳನ್ನು ಉಲ್ಲೇಖಿಸಿದ್ದಾರೆ, ಅವರು ‘ಸನಾತನ ವಿರೋಧಿ’ ಘೋಷಣೆಗಳನ್ನು ಕೂಗಲು ಸಾಧ್ಯವಿಲ್ಲ ಎಂದು ಹೇಳಿದರು.
“ಪಕ್ಷವು ಇಂದು ಹೇಗೆ ದಿಕ್ಕುದೆಸೆಯಿಲ್ಲದಂತಿದೆ ಎಂಬುದನ್ನು ಗಮನಿಸಿದರೆ ನನಗೆ ಅನಾನುಕೂಲವಾಗಿದೆ. ನಾನು ‘ಸನಾತನ ವಿರೋಧಿ’ ಘೋಷಣೆಗಳನ್ನು ಕೂಗಲು ಮತ್ತು ರಾಷ್ಟ್ರದ ಸಂಪತ್ತಿನ ಸೃಷ್ಟಿಕರ್ತರನ್ನು ನಿಂದಿಸಲು ಸಾಧ್ಯವಿಲ್ಲ. ಆದ್ದರಿಂದ, ನಾನು ಪಕ್ಷದ ಎಲ್ಲಾ ಹುದ್ದೆಗಳಿಗೆ ಮತ್ತು ಅದರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.