alex Certify ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೋಹನ್ ನಾಯಕ್ ಗೆ ಬಿಗ್ ರಿಲೀಫ್; ಜಾಮೀನು ರದ್ದು ಮಾಡಲು ನಿರಾಕರಿಸಿದ ಸುಪ್ರೀಂ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಮೋಹನ್ ನಾಯಕ್ ಗೆ ಬಿಗ್ ರಿಲೀಫ್; ಜಾಮೀನು ರದ್ದು ಮಾಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪ ಎದುರಿಸುತ್ತಿದ್ದ ಎನ್.ಮೋಹನ್ ನಾಯಕ್ ಜಾಮೀನು ಅರ್ಜಿ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಈ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆರೋಪಿ ವಿಚಾರಣೆಗೆ ಸಹಕರಿಸುತ್ತಿದ್ದಾನೆ. ಈ ಹಿನ್ನಲೆಯಲ್ಲಿ ಜಾಮೀನು ರದ್ದು ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಇದನ್ನು ಗಮನಿಸಿದ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದ್ದು, ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ನಿರಾಕರಿಸಿದೆ. ಅಲ್ಲದೇ ಹೈಕೋರ್ಟ್ ಆದೇಶದಲ್ಲಿ ತಾನು ಮಧ್ಯಪ್ರವೇಶಿಸಲು ಇಚ್ಛಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಅರ್ಜಿ ವಜಾಗೊಳಿಸಿದೆ.

2023ರ ಡಿಸೆಂಬರ್ ನಲ್ಲಿ ಮೋಹನ್ ನಾಯಕ್ ಗೆ ಜಾಮೀನು ಮಂಜೂರು ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...