ಗೌರಿ ಲಂಕೇಶ್ ಹತ್ಯೆ ಪ್ರಕರಣ ಆರೋಪಿಗೆ ಜಾಮೀನು ವಿರೋಧಿಸಿ ಸರ್ಕಾರ ಮೇಲ್ಮನವಿ: ಸುಪ್ರೀಂಕೋರ್ಟ್ ನೋಟಿಸ್

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ಗೆ ಜಾಮೀನು ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಶುಕ್ರವಾರ ಆರೋಪಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ.

2017ರ ಸೆಪ್ಟಂಬರ್ 5ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿದ್ದು, ಈ ಪ್ರಕರಣದ ಆರೋಪಿ ಮೋಹನ್ ನಾಯಕ್ ಗೆ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್ 7ರಂದು ಜಾಮೀನು ನೀಡಿತ್ತು. ಇದನ್ನು ವಿರೋಧಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ನಡುವೆ ಜನವರಿಯಲ್ಲಿ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಕೂಡ ಈ ಸಂಬಂಧ ಅರ್ಜಿ ಸಲ್ಲಿಸಿದ್ದಾರೆ. ಈ ಎರಡೂ ಅರ್ಜಿಗಳನ್ನು ಏಪ್ರಿಲ್ 9ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನ್ಯಾಯಪೀಠ ನಿರ್ಧರಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read