
ಇಂದ್ರಜಿತ್ ಲಂಕೇಶ್ ಚಿತ್ರವನ್ನು ನಿರ್ದೇಶಿಸಿದ್ದು, ಸಮರ್ಜಿತ್ ಲಂಕೇಶ್ ಹಾಗೂ ಸಾನ್ಯಾ ಅಯ್ಯರ್ ಪ್ರಮುಖ ಪಾತ್ರದಲ್ಲಿದ್ದಾರೆ. ಮಾನಸಿ ಸುಧೀರ್, ಸಂಪತ್ ಮೈತ್ರೇಯ, ಲೂಸ್ ಮಾದ ಯೋಗಿ, ರಾಜೀವ್ ಪಿಳ್ಳೈ ಉಳಿದ ಪಾತ್ರ ವರ್ಗದಲ್ಲಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಎ.ವಿ. ಕೃಷ್ಣ ಕುಮಾರ್ ಛಾಯಾಗ್ರಹಣ, ಬಿ.ಎ ಮಧು, ರಾಜಶೇಖರ್ ಕೆ.ಎಲ್, ಮಾಸ್ತಿ , ಮನು ತಪಸ್ವಿ ಅವರ ಸಂಭಾಷಣೆ, ರವಿವರ್ಮ ಹಾಗೂ ಡಿಫ್ರೆಂಟ್ ಡ್ಯಾನಿ ಸಾಹಸ ನಿರ್ದೇಶನ ಇದೆ. ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಬರ್ಗಿ, ಅನಿರುದ್ಧ ಶಾಸ್ತ್ರಿ ಸಂಗೀತ ಸಂಯೋಜನೆ ನೀಡಿದ್ದಾರೆ.