alex Certify ಗೌತಮ್​ ಗಂಭೀರ್​​ಗೆ ಐಸಿಸ್​​ನಿಂದ ಬೆದರಿಕೆ: ತಡರಾತ್ರಿ ಠಾಣೆಗೆ ತೆರಳಿ ದೂರು ದಾಖಲಿಸಿದ ಬಿಜೆಪಿ ಸಂಸದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೌತಮ್​ ಗಂಭೀರ್​​ಗೆ ಐಸಿಸ್​​ನಿಂದ ಬೆದರಿಕೆ: ತಡರಾತ್ರಿ ಠಾಣೆಗೆ ತೆರಳಿ ದೂರು ದಾಖಲಿಸಿದ ಬಿಜೆಪಿ ಸಂಸದ

ಐಸಿಸ್​ ಕಾಶ್ಮೀರದಿಂದ ತನಗೆ ಜೀವ ಬೆದರಿಕೆ ಬಂದಿದೆ ಎಂದು ಆರೋಪಿಸಿರುವ ಬಿಜೆಪಿ ಸಂಸದ ಹಾಗೂ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್​​ ಮಂಗಳವಾರ ರಾತ್ರಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಗೌತಮ್​ ಗಂಭೀರ್​ ಪ್ರಕರಣ ದಾಖಲಿಸಿರುವ ವಿಚಾರವಾಗಿ ಮಾತನಾಡಿದ ಡಿಸಿಪಿ ಶ್ವೇತಾ ಚೌಹಾಣ್​, ದೂರು ದಾಖಲಿಸಿಕೊಳ್ಳಲಾಗಿದ್ದು ಪೊಲೀಸರು ಈ ವಿಚಾರವಾಗಿ ತನಿಖೆ ಚುರುಕುಗೊಳಿಸಿದ್ದಾರೆ ಎಂದು ಹೇಳಿದ್ರು. ಇತ್ತ ರಾಜೇಂದ್ರ ನಗರದಲ್ಲಿರುವ ಗೌತಮ್​ ಗಂಭೀರ್​ ನಿವಾಸಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇಮೇಲ್​ ಮೂಲಕ ರಾಜಕಾರಣಿ ಹಾಗೂ ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್​ಗೆ ಬೆದರಿಕೆ ಒಡ್ಡಲಾಗಿದೆ. ಈ ಬೆದರಿಕೆಯನ್ನು ಐಸಿಸ್​​ನವರೇ ಹಾಕಿದ್ದಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಗಂಭೀರ್​​ ಬೆದರಿಕೆ ಪತ್ರ ಕಳುಹಿಸಿದ ಇಮೇಲ್​ ವಿಳಾಸವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಟಿಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್​ ಗಂಭೀರ್​​ ಬಿಜೆಪಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಪೂರ್ವ ದೆಹಲಿಯಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ 15 ವರ್ಷಗಳ ಕಾಲ ಟೀಂ ಇಂಡಿಯಾ ಸದಸ್ಯನಾಗಿ ಆಡಿದ್ದಾರೆ. 2018ರಲ್ಲಿ ಗಂಭೀರ್​ ಅಂತಾರಾಷ್ಟ್ರೀಯ ಕ್ರಿಕೆಟ್​ ಜೀವನಕ್ಕೆ ವಿದಾಯ ಘೋಷಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...