alex Certify ಹೋಟೆಲ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮ್ಯಾನೇಜರ್ ಸೇರಿ 13 ಮಂದಿ ಅರೆಸ್ಟ್; ಉನ್ನತ ವ್ಯಕ್ತಿಗಳು ಶಾಮೀಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೋಟೆಲ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮ್ಯಾನೇಜರ್ ಸೇರಿ 13 ಮಂದಿ ಅರೆಸ್ಟ್; ಉನ್ನತ ವ್ಯಕ್ತಿಗಳು ಶಾಮೀಲು

ಪಾಟ್ನಾ: ಬಿಹಾರದ ಗಯಾ ನಗರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಹೋಟೆಲ್ ಮ್ಯಾನೇಜರ್ ಸೇರಿದಂತೆ 13 ಮಂದಿಯನ್ನು ಬಂಧಿಸಿದ್ದಾರೆ.

ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಕೊಲ್ಕತ್ತಾ ಸೋನಾಗಚಿ ಪ್ರದೇಶದಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಮೊಬೈಲ್ ಸೇರಿದಂತೆ ಹಲವು ವಸ್ತು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆದಿದೆ ಬೋಧಗಯಾ ಎಸ್ಎಸ್ಪಿ ಆದಿತ್ಯಕುಮಾರ್ ಮಾಹಿತಿ ನೀಡಿದ್ದಾರೆ.

ಗಯಾ ಪೊಲೀಸರು ಬೋಧಗಯಾದಲ್ಲಿ ಹೋಟೆಲ್ ಮ್ಯಾನೇಜರ್ ಸೇರಿದಂತೆ 13 ಜನರನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸುವ ಮೂಲಕ ಸೆಕ್ಸ್ ರಾಕೆಟ್ ಅನ್ನು ಭೇದಿಸಿದ್ದಾರೆ ಎಂದು ಎಸ್‌ಎಸ್‌ಪಿ ಆದಿತ್ಯ ಕುಮಾರ್ ತಿಳಿಸಿದ್ದಾರೆ.

ಮಹಿಳೆಯರನ್ನು ಕೋಲ್ಕತ್ತಾದ ಸೋನಾಗಚಿಯಿಂದ ಕರೆತರಲಾಗಿದೆ. ಕೆಲವು ಉನ್ನತ ವ್ಯಕ್ತಿಗಳ ಶಾಮೀಲು ಬೆಳಕಿಗೆ ಬಂದಿದೆ ಎಂದು ಅವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...