ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಹೆಚ್.ಕೆ.ಪಾಟೀಲ್, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಿಶೇಷ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದರು.
ಅಲ್ಲದೇ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಸಿ ಅರ್ಜಿ ಸಲ್ಲಿಸಲು ವಿಶೇಷ ಅವಕಾಶ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಹಲವು ವರ್ಷಗಳಿಂದ ಖಾಲಿಯಿರುವ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ಭರ್ತಿ ಆಗಿರಲಿಲ್ಲ. ಕೋವಿಡ್ ಸೇರಿದಂತೆ ವಿವಿಧ ಕಾರಣಗಳಿಂದ ನೇಮಕಾತಿ ವಿಳಂಬವಾಗಿತ್ತು. ಈಬಾರಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆ ನೇಮಕಾತಿಯಲ್ಲಿ ಗರಿಷ್ಠ 3 ವರ್ಷ ವಯೋಮಿತಿ ಸಡಿಲಗೊಳಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.