alex Certify ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸ್ಪರ್ಧೆ ನಿಶ್ಚಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸ್ಪರ್ಧೆ ನಿಶ್ಚಿತ

ದಾವಣಗೆರೆ: ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್ 12ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಇನ್ ಸೈಟ್ಸ್ ಐಎಎಸ್ ತರಬೇತಿ ಕೇಂದ್ರದ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಏಪ್ರಿಲ್ 12ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ನನಗೆ ಜನಬೆಂಬಲ ಇಲ್ಲದಿದ್ದರೆ ನಾನು ಈ ತೀರ್ಮಾನ ಕೈಗೊಳ್ಳುತ್ತಿರಲಿಲ್ಲ. ನಾನು ಯಾವುದೇ ಪಕ್ಷದ ವಿರುದ್ಧ ಬಂಡಾಯ ಸಾರಿಲ್ಲ. ದಾವಣಗೆರೆಯಲ್ಲಿ ಎರಡು ಕುಟುಂಬದ ಬಂಡವಾಳಶಾಹಿಗಳು ಸಾಮ್ರಾಜ್ಯ ಸೃಷ್ಟಿಸಿಕೊಂಡಿದ್ದಾರೆ. ಈ ಕುಟುಂಬಗಳು ತಮ್ಮ ವ್ಯವಹಾರಕ್ಕೆ ಮೊದಲ ಆದ್ಯತೆ ನೀಡಿ ಜನ ಸೇವೆ ಕಡೆಗಣಿಸಿವೆ ಎಂದು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...