alex Certify ನಕಲಿ ಅಂಕಪಟ್ಟಿ ನೀಡಿ ಅಂಚೆ ಸೇವಕರ ಹುದ್ದೆ ಪಡೆದಿದ್ದ 14 ಮಂದಿ ವಿರುದ್ಧ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ಅಂಕಪಟ್ಟಿ ನೀಡಿ ಅಂಚೆ ಸೇವಕರ ಹುದ್ದೆ ಪಡೆದಿದ್ದ 14 ಮಂದಿ ವಿರುದ್ಧ ಕೇಸ್ ದಾಖಲು

ಶಿರಸಿ: ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಕಲಿ ಅಂಕಪಟ್ಟಿ ಆಧಾರ ನೀಡಿ ಗ್ರಾಮೀಣ ಅಂಚೆ ಸೇವಕರ ಹುದ್ದೆಗೆ ಆಯ್ಕೆಯಾಗಿದ್ದ 14 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಚೆ ನಿರೀಕ್ಷಕ ಮಂಜುನಾಥ ದೊಡ್ಡಮನಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 2023ರಲ್ಲಿ ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕರ ಹುದ್ದೆ ನೇಮಕಾತಿ ಪ್ರಕ್ರಿಯೆ ನಡೆದಿದ್ದು, 14 ಮಂದಿ ನಕಲಿ ಅಂಕಪಟ್ಟಿ ಹಾಜರುಪಡಿಸಿ ವಂಚನೆಯಿಂದ ಹುದ್ದೆ ಪಡೆದುಕೊಂಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...