
ಮುಂಬೈ: ಮಸೀದಿಯಲ್ಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿರುವ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಜಿಯೋರೈ ತಹಸಿಲ್ ನ ಮಸ್ಲಾ ಗ್ರಾಮದಲ್ಲಿ ನಡೆದಿದೆ.
ಸ್ಫೋಟದ ತೀವ್ರತೆಗೆ ಮಸೀದಿ ಒಳಭಾಗದಲ್ಲಿ ಹಾನಿಯಾಗಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದ ವೇಳೆ ಮಸೀದಿಯಲ್ಲಿ ಯಾರೂ ಇರಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ತಿಳಿಸಿದ್ದಾರೆ.