alex Certify ಗಮನಿಸಿ : ನಾಳೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ; ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ನಾಳೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ; ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 27.02.2024 ರಂದು  ನಾಳೆ  ಬೆಂಗಳೂರು ನಗರದ ಅರಮನೆ ಆವರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು ಆಡಳಿತದಲ್ಲಿ ಕಾರ್ಯಕ್ಷಮತೆ ಕಾರ್ಯಾಗಾರವನ್ನು ಆಯೋಜಿಸಿದೆ. ಸಮ್ಮೇಳನದ ಕುರಿತು ಸರ್ಕಾರ ನೌಕರರಿಗೆ ಮಹತ್ವದ ಮಾಹಿತಿ ನೀಡಿದೆ.

ದಿನಾಂಕ: 27-02-2024 ರಂದು ಮಂಗಳವಾರ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಹಾಜರಾಗುವ ಎಲ್ಲಾ ನೌಕರರು ಬೆಳಿಗ್ಗೆ 10.00ರ ಒಳಗಾಗಿ ಉಪಹಾರ ಮುಗಿಸಿಕೊಂಡು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಹಾಜರಿರಬೇಕು.

• ಬೆಳಗ್ಗೆ 10.30ಕ್ಕೆ ಗೌರವಾನ್ವಿತ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಕೃಷ್ಣ ಎಸ್.ದೀಕ್ಷಿತ್ ಮತ್ತು ಖ್ಯಾತ ಹೃದ್ರೋಗ ತಜ್ಞರಾದ ಡಾ.ಸಿ.ಎನ್.ಮಂಜುನಾಥ್ ರವರು ಕಾರ್ಯಾಗಾರದಲ್ಲಿ ‘ವಿಶೇಷ ಉಪನ್ಯಾಸ’ ನೀಡಲಿದ್ದಾರೆ.

• ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ರವರಿಂದ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ರವರು ಕಾರ್ಯಕ್ರಮದಲ್ಲಿ ನೌಕರರಿಗೆ ಆಶಯ ನುಡಿಗಳನ್ನಾಡಲಿದ್ದಾರೆ.

• ಮಧ್ಯಾಹ್ನ 1.30ರ ನಂತರ ಲಘು ಭೋಜನ ವ್ಯವಸ್ಥೆ ಮಾಡಲಾಗಿದೆ.

• ಕಾರ್ಯಕ್ರಮ ಮುಗಿದ ನಂತರ ಭಾಗವಹಿಸಿದ ಸರ್ಕಾರಿ ನೌಕರರಿಗೆ ಮಾತ್ರ ಸ್ಥಳದಲ್ಲಿಯೇ ಹಾಜರಾತಿ ಪ್ರಮಾಣ ಪತ್ರವನ್ನು ನೀಡಲಾಗುವುದು. ಯಾವುದೇ ಕಾರಣಕ್ಕೂ ಹಾಜರಾತಿ ಪ್ರಮಾಣ ಪತ್ರಗಳನ್ನು ಕಾರ್ಯಕ್ರಮದಲ್ಲಿ ಭಾಗವಹಿಸದೇ ಇರುವವರಿಗೆ ನೀಡಲಾಗುವುದಿಲ್ಲ.

• ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಬಸ್ಗಳಿಗೆ ಪ್ರತ್ಯೇಕವಾಗಿ ಸರ್ಕಸ್ ಮೈದಾನ, ಜಯಮಹಲ್ ರಸ್ತೆ, ಟಿ.ವಿ. ಟವರ್ ಎದುರು ಪಾರ್ಕಿಂಗ್ ವ್ಯವಸ್ಥೆಕಲ್ಪಿಸಲಾಗಿದೆ. (ಕ್ಯೂ.ಆರ್. ಕೋಡ್ ಮತ್ತು ಲಿಂಕ್ ಈಗಾಗಲೇ ಕಳುಹಿಸಲಾಗಿದೆ)

•  ದ್ವಿಚಕ್ರ ವಾಹನಗಳು ಮತ್ತು ಲಘು ವಾಹನಗಳಿಗೆ ತ್ರಿಪುರವಾಸಿನಿ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. (ಕ್ಯೂ.ಆರ್. ಕೋಡ್ ಮತ್ತು ಲಿಂಕ್ ಈಗಾಗಲೇ ಕಳುಹಿಸಲಾಗಿದೆ) ಎಂದು ಸರ್ಕಾರ ಪ್ರಕಟಣೆ ತಿಳಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...