
ಬೆಂಗಳೂರು: ವಿವಿಧ ಇಲಾಖೆ, ನಿಗಮ, ಮಂಡಳಿಗಳಲ್ಲಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ತನಿಖಾಧಿಕಾರಿಯನ್ನು ಸರ್ಕಾರ ನೇಮಕ ಮಾಡಿದೆ.
ತನಿಖಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಸುಧೀರ್ ಕುಮಾರ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಆರು ತಿಂಗಳ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಆದೇಶಿಸಿದೆ. ಈ ಹಿಂದಿನ ಎಸಿಎಸ್ ಡಾ. ಬಿ.ವಿ. ರಮಣ ರೆಡ್ಡಿ ವರದಿ ಪರಿಶೀಲಿಸಿ ತನಿಖೆಗೆ ಆದೇಶ ನೀಡಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದಲ್ಲಿ ಅಕ್ರಮದ ಆರೋಪ ಕುರಿತು ತನಿಖೆ ನಡೆಸಲು ತಿಳಿಸಲಾಗಿದೆ.