ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಅಧಿಕಾರಿಗಳು ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ದೇವಾಲಯದ ಬಳಿ ಇದ್ದ ಸಾಲು ಸಾಲು ಅಂಗಡಿಗಳನ್ನು ತೆರವುಗೊಳಿಸಲಾಗಿದೆ.
ಗುತ್ತಿಗೆ ಅವಧಿ ಮುಗಿದರೂ ಖಾಲಿ ಮಾಡದ ಕಾರಣ ಅಂಗಡಿಗಳನ್ನು ತೆರವು ಮಾಡಲಾಗಿದೆ. ಅಂಗಡಿಗಳನ್ನು ತೆರವು ಮಾಡುವಂತೆ ಈ ಹಿಂದೆ ಹಲವು ಬಾರಿ ನೋಟಿಸ್ ನೀಡಿದ್ದರೂ ಅಂಗಡಿ ಮಾಲೀಕರು ತೆರವು ಮಾಡಿರಲಿಲ್ಲ ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಆದೇಶದ ಮೇರೆಗೆ ಎಇ ನಾರಾಯಣಸ್ವಾಮಿ ನೇತೃತ್ವದಲ್ಲಿ ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ.
ಕೆಲವು ಅಂಗಡಿಗಳಿಗೆ ಬೀಗ ಹಾಕಿ ಅಂಗಡಿ ತೆರವು ಮಡುವಂತೆಸೂಚನೆ ನಿಡಲಾಗಿದೆ.