ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಇಂದು ಮನೆಯೊಂದರಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ಲೋನಿಯ ಕಾಂಚನ್ ಪಾರ್ಕ್ ಕಾಲೋನಿಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದೆ. ಹೊಗೆಯಿಂದ ಉಸಿರುಗಟ್ಟಿ, ಬೆಂಕಿ ತಗುಲಿ ಸುಟ್ಟಗಾಯಗಳಿಂದ ಮೂವರು ಮಕ್ಕಳು ಮತ್ತು ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ.
ಮನೆಯಲ್ಲಿ ಒಟ್ಟು ಎಂಟು ಜನರಿದ್ದರು. ಉಳಿದವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.