ರಾಮನಗರ : ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ರಾಮನಗರದಲ್ಲಿ ಗಿಫ್ಟ್ ಪಾಲಿಟಿಕ್ಸ್ ಆರಂಭವಾಗಿದ್ದು, ಮತದಾರರಿಗೆ ಕಾಂಗ್ರೆಸ್ ಕುಕ್ಕರ್, ಡಿನ್ನರ್ ಸೆಟ್ ಹಂಚಿದೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಸದ್ದು ಮಾಡುತ್ತಿದೆ. ರಾಮನಗರದಲ್ಲಿ ಮತದಾರರಿಗೆ ಕುಕ್ಕರ್, ತವಾ, ಡಿನ್ನರ್ ಸೆಟ್ ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಚುನಾವಣೆ ಘೋಷಣೆಗೂ ಮುನ್ನವೇ ಉಡುಗೊರೆ ನೀಡುವ ಮೂಲಕ ಮತದಾರರನ್ನು ಸೆಳೆಯಲಾಗುತ್ತಿದೆ.
ಈ ಬಗ್ಗೆ ಬಿಜೆಪಿ ಕಿಡಿಕಾರಿದ್ದು, ಮತದಾರರಿಗೆ ಆಮಿಷ ಒಡ್ಡುತ್ತಿರುವ ಕಾಂಗ್ರೆಸ್ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.