alex Certify ಗಿಗ್ ಕಾರ್ಮಿಕರ ಗಮನಕ್ಕೆ : ʻಜೀವ ವಿಮೆ ನೋಂದಣಿʼಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಿಗ್ ಕಾರ್ಮಿಕರ ಗಮನಕ್ಕೆ : ʻಜೀವ ವಿಮೆ ನೋಂದಣಿʼಗೆ ಅರ್ಜಿ ಆಹ್ವಾನ

ಕಾರ್ಮಿಕ ಇಲಾಖೆ ವತಿಯಿಂದ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತಗೊಂಡ ಕಾರ್ಮಿಕರಿಗೆ ಅಪಘಾತ ಪರಿಹಾರ ಪಡೆಯಲು “ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ” ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಈ ಯೋಜನೆಯನ್ನು ಜಾರಿಗೆ ತಂದಿದ್ದು, ಎಲ್ಲಾ ಅರ್ಹ ಗಿಗ್ ಕಾರ್ಮಿಕರುಗಳಾದ ಸ್ವಿಗ್ಗಿ, ಜೊಮಾಟೋಗಳಂತಹ ಸಂಸ್ಥೆಗಳಲ್ಲಿ ಫುಡ್‍ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್‍ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಟೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರುಗಳು ಸೇವಾಸಿಂಧು (https://sevasindhuservices.karnataka.gov.in) ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳಬಹುದು.

ಸೌಲಭ್ಯಗಳು:

ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ರೂ.2 ಲಕ್ಷ ಹಾಗೂ ಜೀವ ವಿಮೆ ರೂ.2 ಲಕ್ಷ ಸೇರಿ ಒಟ್ಟು ರೂ.4 ಲಕ್ಷ ಸಿಗಲಿದೆ. ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2 ಲಕ್ಷಗಳವರೆಗೆ ಪರಿಹಾರ. ಆಸ್ಪತ್ರೆ ವೆಚ್ಚ ಮರುಪಾವತಿ ರೂ.1 ಲಕ್ಷಗಳವರೆಗೆ (ಅಪಘಾತ ಪ್ರಕರಣಗಳಿಗೆ ಮಾತ್ರ) ಪರಿಹಾರ. ಜೀವ ವಿಮಾ ರೂ.2 ಲಕ್ಷ ಪರಿಹಾರ.

ಅರ್ಹತೆ:

18 ರಿಂದ 60 ವಯೋಮಾನದವರಾಗಿರಬೇಕು. ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು. ಕರ್ನಾಟಕದಲ್ಲಿ ಗಿಗ್ ವೃತ್ತಿ (ಡೆಲಿವರಿ ಕಾರ್ಯ) ನಿರ್ವಹಿಸುತ್ತಿರುವವರಿಗೆ ಮಾತ್ರ.

ಬೇಕಾದ ದಾಖಲೆಗಳು:

ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯು ಆಧಾರ್ ಲಿಂಕ್ ಆಗಿರಬೇಕು, ವೃತ್ತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ/ಉದ್ಯೋಗ ಪ್ರಮಾಣ ಪತ್ರ, ಇ-ಶ್ರಮ್ ನೋಂದಣಿ ಸಂಖ್ಯೆ (ಇಲ್ಲವಾದಲ್ಲಿ eshram.gov.in ಅಲ್ಲಿ ನೋಂದಾಯಿಸಿ ಪಡೆದುಕೊಳ್ಳುವುದು), ಪಡಿತರ ಚೀಟಿ, ಪಾನ್ ಕಾರ್ಡ್ ಸಂಖ್ಯೆ ಇರುವ ದಾಖಲೆ ಇರಬೇಕು.

ಹೆಚ್ಚಿನ ಮಾಹಿತಿಗಾಗಿ ನಲ್ಲಚೇರುವು ಪ್ರದೇಶದ ಮಹಮ್ಮದಿಯ ಕಾಲೇಜ್ ಹಿಂಭಾಗದ ಬಳ್ಳಾರಿ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿ ಅವರ ಕಚೇರಿ ಅಥವಾ ಕಚೇರಿಯ ದೂ.08392-254875 ಹಾಗೂ ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರುಗಳನ್ನು  ಸಂಪರ್ಕಿಸಿಸಬಹುದು

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...