
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಶುಂಠಿ ಕಳ್ಳರ ಹಾವಳಿ ಜಾಸ್ತಿಯಾಗಿದೆ. ರಾತ್ರೋ ರಾತ್ರಿ ಹೊಲದಲ್ಲಿದ್ದ ಶುಂಠಿ ಕದ್ದೊಯ್ಯುವ ಕೃತ್ಯ ನಡೆಯುತ್ತಿದ್ದು, ಬೆಳೆಗಾರರಿಗೆ ಆತಂಕ ಎದುರಾಗಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ನವಿಲೂರು ಗ್ರಾಮದಲ್ಲಿ ಶುಂಠಿ ಬೆಳೆ ಕಳವು ಮಾಡಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾರೆ. ಕಷ್ಟಪಟ್ಟು ಬೆಳೆದ ಶುಂಠಿ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಮತ್ತೊಂದು ಕಡೆ ರಾತ್ರಿ ಹೊತ್ತು ಜಮೀನುಗಳಿಗೆ ನುಗ್ಗಿ ಶುಂಠಿ ಬೆಳೆ ಕಳವು ಮಾಡಲಾಗುತ್ತಿದೆ.
ಶುಂಠಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿ ಪರದಾಡುವಂಟಾಗಿದೆ. ರಾತ್ರಿ ಹೊತ್ತು ಶುಂಠಿ ಬೆಳೆ ಕಳವು ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಬಂಧನ ಬಂಧನಕ್ಕೆ ಬಲೆ ಬೀಸಿದ್ದಾರೆ.