ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಚಾಕೊಲೇಟ್ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
55 ವರ್ಷದ ವೇಣುಗೋಪಾಲ್ ಇಂತಹ ಕೃತ್ಯ ಎಸಗಿದ ಆರೋಪಿ ಎಂದು ಹೇಳಲಾಗಿದೆ. ಕೊಳ್ಳೇಗಾಲದ ಮಂಜುನಾಥ ನಗರ ಬಡಾವಣೆ ನಿವಾಸಿಯಾಗಿರುವ ಆರೋಪಿ ಎದುರು ಮನೆ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಬಾಲೆಯ ಅಂಗದಲ್ಲಿ ಗಾಯಗಳಾಗಿದ್ದು, ಪೋಷಕರು ಗಮನಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೊಳ್ಳೇಗಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.