ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅನುಮನಾಸ್ಪದವಾಗಿ ಯುವತಿಯೊಬ್ಬಳ ಶವ ಪತ್ತೆಯಾಗಿದೆ. ಕತ್ತುಕುಯ್ದ ರೀತಿಯಲ್ಲಿ ಮನೆಯಲ್ಲಿಯೇ ಯುವತಿಯೊಬ್ಬಳ ಮೃತದೇಹ ಪತ್ತೆತ್ತೆಯಾಗಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
22 ವರ್ಷದ ಪ್ರಭುಧ್ಯ ಮೃತ ಯುವತಿ. ದ್ವಿತೀಯ ವರ್ಷದ ಪದವಿ ಓದುತ್ತಿದ್ದ ಪ್ರಭುಧ್ಯ ಇದೀಗ ಇದ್ದಕ್ಕಿದ್ದಂತೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಸುಬ್ರಹ್ಮಣ್ಯಪುರ ಪೊಲಿಸರು ಯುಡಿಆರ್ ದಾಖಲಿಸಿಕೊಂಡಿದ್ದಾರೆ.
ಯುವತಿಯ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಅನುಮಾನಕ್ಕೆ ಕಾರಣವಾಗಿದ್ದು, ತನಿಖೆಯಿಂದಷ್ಟೇ ಸತ್ಯಾಂಶ ಹೊರಬರಬೇಕಿದೆ.