ಚೆನ್ನೈ: ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿದ ಕಾಮುಕರು ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚೆನ್ನೈನ ಕಲಂಬಕಂ ಟರ್ಮಿನಸ್ ಬಳಿ ನಡೆದಿದೆ.
ಅಸ್ಸಾಂ ಮೂಲದ ಯುವತಿ ಬಸ್ ಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಆಕೆಯನ್ನು ಅಪಹರಿಸಿದ್ದು, ಚಾಕು ತೋರಿಸಿ ಬೆದರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.
ಆಟೋದಲ್ಲಿ ಕಾಮುಕರು ಯುವತಿಗೆ ಚಿತ್ರಹಿಂಸೆ ನೀಡುತ್ತಿರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಧ್ಯರಾತ್ರಿ ಕೊಯೆಂಬೆಡು ಬಳಿ ಪೊಲೀಸರು ಯುವತಿಯನ್ನು ರಕ್ಷಿಸಿದ್ದಾರೆ.
ಸೇಲಂನ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ಮಾಧವರಂ ನಲ್ಲಿರುವ ತನ್ನ ಸಂಬಂಧಿಕರನ್ನು ಭೇಟಿ ಮಾಡಲೆಂದು ಬಸ್ ಗಾಗಿ ಕಾಯುತ್ತಿದ್ದಳು. ಈ ವೇಳೆ ಕಾಮುಕರು ಯುವತಿಯನ್ನು ಕಿಡ್ನ್ಯಾಪ್ ಮಾಡಿ ಆಟೋದಲ್ಲಿಯೇ ಲೈಂಗಿಕ ದೌರ್ಜನ್ಯವೆಸಗಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾಮುಕರ ಪತ್ತೆಗಾಗಿ ಮೂರು ವಿಶೇಶ ತಂಡ ರಚನೆ ಮಾಡಿದ್ದಾರೆ.