ಮಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯ ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿದೆ. ಮಂಗಳೂರು ಹೊರವಲಯದ ಜೋಕಟ್ಟೆ ಪ್ರದೇಶದಲ್ಲಿ ದುಷ್ಕೃತ್ಯ ನಡೆದಿದೆ.
ಬೆಳಗಾವಿ ಮೂಲದ 13 ವರ್ಷದ ಬಾಲಕಿಯ ಕೊಲೆ ಮಾಡಲಾಗಿದೆ. ಚಿಕಿತ್ಸೆ ಪಡೆಯಲು ಸಂಬಂಧಿಕರ ಮನೆಗೆ ಬಂದಿದ್ದ ಬಾಲಕಿಯನ್ನು ಹತ್ಯೆ ಮಾಡಲಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.