![](https://kannadadunia.com/wp-content/uploads/2021/12/arrested-16382318763x2-1.jpg)
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವೈದ್ಯನೊಬ್ಬನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ.
ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವೊಂದರಲ್ಲಿ ವೈದ್ಯನೊಬ್ಬ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ದೂರು ನೀಡಲು ಅಧಿಕಾರಿಯನ್ನು ಸಂಪರ್ಕಿಸಿದ ಬಾಲಕಿಯ ತಂದೆ, ಆರೋಪಿ ನಮಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ಪೊಲೀಸ್ ಠಾಣೆಗೆ ತನ್ನ ಸ್ನೇಹಿತರೊಂದಿಗೆ ಆಗಮಿಸಿದ ಆರೋಪಿ ವೈದ್ಯ, ಬಾಲಕಿಗೆ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ವೈದ್ಯನನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.