ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲಾ, ಕಾಲೇಜುಗಳಲ್ಲಿ ಓದುತ್ತಿರುವ 19 ಲಕ್ಷ ಹೆಣ್ಣು ಮಕ್ಕಳಿಗೆ ವರ್ಷಾಂತ್ಯದೊಳಗೆ ಉಚಿತ ಸ್ಯಾನಿಟರಿ ಕಿಟ್ ವಿತರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಶೂನ್ಯ ವೇಳೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಹಿಂದಿನ ಸರ್ಕಾರದಲ್ಲಿ ನಿಲ್ಲಿಸಲಾಗಿದ್ದ ಶುಚಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪುನರಾರಂಭಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲಾ, ಕಾಲೇಜುಗಳ ಹೆಣ್ಣು ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ಕಿಟ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.