
ಮಂಗಳೂರು: 17 ವರ್ಷದ ಅಪ್ರಾಪ್ತೆಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯುವಕನೊಬ್ಬನ ಪ್ರೇಮ ಪಾಷಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಮೃತಳ ಪೋಷಕ್ಲರು ತನ್ನ ಮಗಳ ಸಾವಿಗೆ ಪ್ರವೀಣ್ ಚಾರ್ಮಾಡಿ ಕಾರಣ ಎಂದು ಆರೋಪಿಸಿದ್ದಾರೆ. ಆತ ಮಗಳಿಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ. ಇದರಿಂದ ಮನನೊಂದು ವಾರದ ಹಿಂದೆ ಯುವತಿ ಇಲಿ ಪಾಷಾಣ ಸೇವಿಸಿದ್ದಳು. ತೀವ್ರ ಅಸ್ವಸ್ಥಳಾಗಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.