ವಿಜಯಪುರ: ಗ್ರಾಮೀಣ ಭಾಗದ ರೈತರ ಮಕ್ಕಳಿಗೆ ಸರ್ಕಾರದಿಂದ ನೀಡಲಾಗುತ್ತಿರುವ ರೈತ ಮಕ್ಕಳ ವಿದ್ಯಾನಿಧಿ ಶಿಷ್ಯವೇತನವನ್ನು 8, 9 ಮತ್ತು 10ನೇ ತರಗತಿ ಓದುತ್ತಿರುವ ಹೆಣ್ಣುಮಕ್ಕಳಿಗೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಜಯಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ರೈತರ ಮಕ್ಕಳಿಗೆ ಶಿಷ್ಯವೇತನ ಘೋಷಣೆ ಮಾಡಲಾಗಿದೆ. ಅದೇ ರೀತಿ 8, 9 ಮತ್ತು 10ನೇ ತರಗತಿ ಓದುತ್ತಿರುವ ಗ್ರಾಮೀಣ ಭಾಗದ ರೈತರ ಹೆಣ್ಣುಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.