alex Certify ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಫೆ. 7 ರಂದು ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಸಿಎಂ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಫೆ. 7 ರಂದು ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಫೆಬ್ರವರಿ 7 ರಂದು ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ರಾಜ್ಯ ಸರ್ಕಾರ ಪರಿಚಯಿಸುತ್ತಿರುವ ಓಬವ್ವ ಆತ್ಮರಕ್ಷಣೆ ಕಲೆ ಯೋಜನೆಯನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸಲಾಗಿದೆ.

ಪ್ರಾಯೋಗಿಕವಾಗಿ 100 ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆಯುವ ಮಕ್ಕಳಿಗೆ ಇಲಾಖೆ ವತಿಯಿಂದ ಸಮವಸ್ತ್ರ ನೀಡಲಾಗುವುದು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತರಬೇತಿ ನೀಡಲಾಗುವುದು.

625 ಹಾಸ್ಟೆಲ್ ಗಳ 50,000 ಹೆಣ್ಣು ಮಕ್ಕಳಿಗೆ ತರಬೇತಿ ನೀಡಲಾಗುತ್ತದೆ. ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ 257 ಹಾಸ್ಟೆಲ್ ಗಳ 30,000 ಹೆಣ್ಣು ಮಕ್ಕಳಿಗೆ ತರಬೇತಿ ನೀಡಲಾಗುವುದು. 818 ಕ್ರೈಸ್ ಹಾಸ್ಟೆಲ್ ಗಳ 1.02 ಲಕ್ಷ ಹೆಣ್ಣು ಮಕ್ಕಳಿಗೆ ತರಬೇತಿ ನೀಡಲಾಗುವುದು. 1704 ಹಾಸ್ಟೆಲ್ ವಸತಿ ಶಾಲೆಗಳ 1.82 ಲಕ್ಷ ಹೆಣ್ಣುಮಕ್ಕಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ.

ಹೆಣ್ಣುಮಕ್ಕಳ ತರಬೇತಿಗೆ ಮಹಿಳಾ ತರಬೇತುದಾರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಬ್ಲಾಕ್ ಬೆಲ್ಟ್ ಪಡೆದ ಮಹಿಳಾ ತರಬೇತುದಾರರಿಂದ ತರಬೇತಿ ನೀಡಲಾಗುವುದು. 1000 ಕ್ಕೂ ಹೆಚ್ಚು ತರಬೇತುದಾರರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗಿದ್ದು, ಅವರಿಗೆ ಗೌರವಧನ ನೀಡಲು ಸರ್ಕಾರ ತೀರ್ಮಾನಿಸಿದೆ. 100 ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಈಗಾಗಲೇ ತರಬೇತಿ ಶುರುವಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...