alex Certify BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ ಧರ್ಮದೇಟು ನೀಡಿದ ಪೋಷಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ ಧರ್ಮದೇಟು ನೀಡಿದ ಪೋಷಕರು

ದಾವಣಗೆರೆ: ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ವಿಷಯ ತಿಳಿದ ಪೋಷಕರು ಶಾಲೆಗೆ ನುಗ್ಗಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಯರಗಟ್ಟೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲೋಕೇಶ್ ಎಂಬ ಶಿಕ್ಷಕ ವಿದ್ಯಾರ್ಥಿನಿಯರಿಗೆ ಕೆಲ ದಿನಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಶಿಕ್ಷಕನ ವರ್ತನೆಯಿಂದ ನೊಂದ ವಿದ್ಯಾರ್ಥಿನಿಯರು ಮನೆಯಲ್ಲಿ ಪೋಷಕರಿಗೆ ತಿಳಿಸಿದ್ದಾರೆ.

ಸ್ಥಳೀಯರೊಂದಿಗೆ ಶಾಲೆಗೆ ಧಾವಿಸಿ ಬಂದ ವಿದ್ಯಾರ್ಥಿನಿಯರ ಪೋಷಕರು ಶಿಕ್ಷಕ ಲೋಕೇಶ್ ನನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...