ಗಾಂಧಿ ಶಾಂತಿ ಪ್ರಶಸ್ತಿ ಗೌರವ ವಿವಾದದ ನಡುವೆ ಗೀತಾ ಪ್ರೆಸ್, 1 ಕೋಟಿ ರೂಪಾಯಿ ನಗದು ಬಹುಮಾನ ಸ್ವೀಕರಿಸಲು ನಿರಾಕರಿಸಿದೆ. 2021 ರ ಗಾಂಧಿ ಶಾಂತಿ ಪ್ರಶಸ್ತಿಗಾಗಿ 1 ಕೋಟಿ ರೂಪಾಯಿ ನಗದು ಬಹುಮಾನವನ್ನು ಸ್ವೀಕರಿಸಲು ವಿಶ್ವದ ಅತಿದೊಡ್ಡ ಪ್ರಕಾಶಕರಲ್ಲಿ ಒಂದಾದ ಗೋರಖ್‌ಪುರದ ಗೀತಾ ಪ್ರೆಸ್ ಗೌರವಕ್ಕೆ ಆಯ್ಕೆಯಾದ ನಂತರ ವಿವಾದದ ನಡುವೆ ಸಿಲುಕಿದ್ದು ನಗದು ಬಹುಮಾನವನ್ನ ನಿರಾಕರಿಸಿದೆ.
ಪ್ರಧಾನಿ ಮೋದಿ ನೇತೃತ್ವದ ತೀರ್ಪುಗಾರರ ಸಮಿತಿಯು ಭಾನುವಾರ ಗೀತಾ ಪ್ರೆಸ್ ಅನ್ನು ಪ್ರಶಸ್ತಿಗೆ ಭಾಜನರಾಗಿ ಆಯ್ಕೆ ಮಾಡಲು ಸರ್ವಾನುಮತದಿಂದ ನಿರ್ಧರಿಸಿತು. “2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಪಡೆದಿರುವ ಗೋರಖ್ ಪುರದ ಗೀತಾ ಪ್ರೆಸ್ ಅನ್ನು ನಾನು ಅಭಿನಂದಿಸುತ್ತೇನೆ. ಅವರು ಕಳೆದ 100 ವರ್ಷಗಳಲ್ಲಿ ಜನರಲ್ಲಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಿವರ್ತನೆಗಳನ್ನು ಹೆಚ್ಚಿಸಲು ಶ್ಲಾಘನೀಯ ಕೆಲಸ ಮಾಡಿದ್ದಾರೆ” ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಟ್ವೀಟ್ ಮಾಡಿದ್ದಾರೆ.
ಇಂದು ಪ್ರಕಾಶಕರು ಪ್ರಶಸ್ತಿ ಗೌರವನ್ನು ಮಾತ್ರ ಸ್ವೀಕರಿಸುವುದಾಗಿ ಹೇಳಿದ್ದಾರೆ. ಸರ್ಕಾರವು ನಗದು ಬಹುಮಾನದ ಮೊತ್ತವನ್ನು ಬೇರೆಡೆ ಖರ್ಚು ಮಾಡಬೇಕೆಂದು ಸೂಚಿಸಿದೆ. ಪ್ರಶಸ್ತಿಯು ಫಲಕ ಮತ್ತು ಸೊಗಸಾದ ಸಾಂಪ್ರದಾಯಿಕ ಕರಕುಶಲ/ಕೈಮಗ್ಗದ ವಸ್ತುವನ್ನು ಸಹ ಒಳಗೊಂಡಿದೆ.
ಗೀತಾ ಪ್ರೆಸ್ ಅನ್ನು ಗೌರವಿಸುವ ನಿರ್ಧಾರವನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಇದು “ಅಪಹಾಸ್ಯ” ಮತ್ತು “ಸಾವರ್ಕರ್ ಮತ್ತು ಗೋಡ್ಸೆಗೆ ಪ್ರಶಸ್ತಿ ನೀಡಿದಂತೆ” ಎಂದು ಹೇಳಿದೆ.
ಈ ವರ್ಷ ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಗೋರಖ್‌ಪುರದ ಗೀತಾ ಪ್ರೆಸ್‌ಗೆ 2021 ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ ಎಂದಿರುವ ಕಾಂಗ್ರೆಸ್ ನ ಜೈ ರಾಂ ರಮೇಶ್, ಅಕ್ಷಯ ಮುಕುಲ್ ಅವರು ಗೀತಾ ಪ್ರೆಸ್ ಬಗ್ಗೆ 2015 ರಲ್ಲಿ ಬರೆದಿರುವ ಕೃತಿಯೊಂದನ್ನ ಹಂಚಿಕೊಂಡಿದ್ದಾರೆ. ಇದರಲ್ಲಿ ಗೀತಾ ಪ್ರೆಸ್ ನ ಉತ್ತಮ ಜೀವನಚರಿತ್ರೆ ಇದೆ. ಇದರಲ್ಲಿ ಅವರು ಮಹಾತ್ಮರೊಂದಿಗೆ ಹೊಂದಿದ್ದ ಸಂಘರ್ಷದ ಸಂಬಂಧಗಳನ್ನು ಹೊಂದಿದೆ. ಇಂತಹ ಪ್ರೆಸ್ ಗೆ ಪ್ರಶಸ್ತಿ ಗೌರವ ನಿರ್ಧಾರವು ನಿಜವಾಗಿಯೂ ಹಾಸ್ಯಾಸ್ಪದವಾಗಿದೆ ಮತ್ತು ಸಾವರ್ಕರ್ ಮತ್ತು ಗೋಡ್ಸೆಗೆ ಪ್ರಶಸ್ತಿ ನೀಡಿದಂತೆ ಎಂದಿದ್ದಾರೆ.
ಗಾಂಧಿ ಶಾಂತಿ ಪ್ರಶಸ್ತಿಯು ಮಹಾತ್ಮ ಗಾಂಧಿಯವರ 125 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರು ಪ್ರತಿಪಾದಿಸಿದ ಆದರ್ಶಗಳಿಗೆ ಗೌರವವಾಗಿ 1995 ರಲ್ಲಿ ಸ್ಥಾಪಿಸಲಾದ ವಾರ್ಷಿಕ ಪ್ರಶಸ್ತಿಯಾಗಿದೆ.
ಈ ಪ್ರಶಸ್ತಿಯು ರಾಷ್ಟ್ರೀಯತೆ, ಜನಾಂಗ, ಭಾಷೆ, ಜಾತಿ, ಮತ ಅಥವಾ ಲಿಂಗವನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಮುಕ್ತವಾಗಿದೆ. ಇತ್ತೀಚಿನ ಪ್ರಶಸ್ತಿ ಪುರಸ್ಕೃತರಲ್ಲಿ ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್, ಒಮಾನ್ (2019) ಮತ್ತು ಬಾಂಗ್ಲಾದೇಶದ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ (2020) ಸೇರಿದ್ದಾರೆ.