ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಒದಗಿಸಿರುವ ವಿದ್ಯುತ್ ಸೌಲಭ್ಯವನ್ನು ಉಚಿತವಾಗಿ ಒದಗಿಸುವ ಕುರಿತು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ ” ಎಂದು ಘೋಷಿಸಲಾಗಿರುತ್ತದೆ.
ಮುಂದುವರೆದು ಉಲ್ಲೇಖ(2)ರ ಸಕಾ ಯೋಜನೆ/ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 2024ರವರೆಗೆ ಮೂರು ತಿಂಗಳ ಅನುದಾನ ಬಿಡುಗಡೆ ಮಾಡಲಾಗಿದ್ದು, 2024-25ನೇ ಸಾಲಿನ ರಾಜ್ಯ ವಲಯದ ವೆಚ್ಚಗಳಿಗೆ ಏಪ್ರಿಲ್-2024 ರಿಂದ ಜೂನ್ , B 2202-01-053-0-02-058 ರಲ್ಲಿ ಸರ್ಕಾರಿ ಶಾಲೆಗಳ ವಿದ್ಯುತ್ ಮತ್ತು ನೀರಿನ ವಚ್ಚ ಭರಿಸಲು ರೂ. 1000.00 ಲಕ್ಷಗಳ ಅನುದಾನ ನಿಗದಿಗೊಳಿಸಿ. ಪ್ರಸ್ತುತ ರೂ. 250.00 ಲಕ್ಷಗಳ ಅನುದಾನ ಬಿಡುಗಡೆಯಾಗಿರುತ್ತದೆ.