alex Certify ಗ್ರಾಹಕರಿಗೆ ಕುದಿಸಿದ ಶುದ್ಧ ಬಿಸಿ ನೀರನ್ನೇ ಕೊಡಿ ; ಹೋಟೆಲ್, ಆಹಾರ ಮಳಿಗೆಗಳಿಗೆ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಕುದಿಸಿದ ಶುದ್ಧ ಬಿಸಿ ನೀರನ್ನೇ ಕೊಡಿ ; ಹೋಟೆಲ್, ಆಹಾರ ಮಳಿಗೆಗಳಿಗೆ ಖಡಕ್ ಸೂಚನೆ

ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಕಾಲರಾ ಮತ್ತು ವಾಂತಿ, ಬೇದಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯಲ್ಲಿಯೂ ನೀರಿನ ಅಭಾವ ಉಂಟಾಗಿದ್ದು, ಜಿಲ್ಲೆಯ ಎಲ್ಲಾ ರಸ್ತೆಬದಿ ವ್ಯಾಪಾರಿಗಳು, ಡಾಬಾ, ಸ್ವೀಟ್ ಸ್ಟಾಲ್, ಬೇಕರಿ,ಚಾಟ್ಸ್, ಮೆಸ್, ಕ್ಯಾಂಟೀನ್, ಕ್ಯಾಟರಿಂಗ್, ಸಮುದಾಯ ಭವನ, ಕಲ್ಯಾಣ ಮಂಟಪದವರು, ಪೇಯಿಂಗ್‍ಗೆಸ್ಟ್, ಹೋಮ್-ಸ್ಟೇ, ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾರ್ಟ್, ಅಂಗನವಾಡಿ, ಮದ್ಯಾಹ್ನದ ಬಿಸಿಯೂಟ ಕಾರ್ಯಕ್ರಮ, ಸರ್ಕಾರಿ ಮತ್ತು ಸರ್ಕಾರೇತರ ವಸತಿನಿಲಯ ಮತ್ತು ಎಲ್ಲಾ ಆಹಾರ ತಯಾರಿಕಾದಾರರು ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಕಡ್ಡಾಯವಾಗಿ ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರನ್ನು ನೀಡುವಂತೆ ಸೂಚಿಸಿದೆ.

ಆಹಾರ ತಯಾರಿಕಾ ಮತ್ತು ಸಂಗ್ರಹಣಾ ಸ್ಥಳಗಳಲ್ಲಿ ನೊಣಗಳು, ಸೊಳ್ಳೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ, ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವುದು ಮತ್ತು ತಯಾರಿಸಿರುವ ಎಲ್ಲಾ ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಿಟ್ಟು ಸ್ವಚ್ಚವಾದ ವಿಧಾನದ ಮೂಲಕ ತಯಾರಿಕೆ ಮತ್ತು ವಿತರಣೆಯನ್ನು ಮಾಡುವಂತೆ ತಿಳಿಸಿದೆ.

ಹಾಗೆಯೇ ಎಲ್ಲಾ ಆಹಾರ ಉದ್ದಿಮೆದಾರರು ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಒಳಗೊಂಡಂತೆ ಆಹಾರ ಪದಾರ್ಥ ವ್ಯಾಪಾರಸ್ಥರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಆಹಾರ ನೋಂದಣಿ/ ಪರವಾನಗಿಯನ್ನು ಪಡೆಯದೇ ವ್ಯಾಪಾರವಹಿವಾಟು ನಡೆಸುವವರು ತಕ್ಷಣದಲ್ಲೇ ಇಲಾಖೆಯಿಂದ ಆಹಾರ ನೋಂದಣಿ/ ಪರವಾನಗಿಯನ್ನು ಪಡೆದುಕೊಳ್ಳುವುದು, ತಪ್ಪಿದಲ್ಲಿ ಕಾಯ್ದೆಯಡಿ ನೋಟೀಸ್ ಮತ್ತು ದಂಡವನ್ನು ವಿಧಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ(ಎಫ್‍ಎಸ್‍ಎಸ್‍ಎ) ಅಂಕಿತಾಧಿಕಾರಿ ಡಾ.ಇ.ಅನಿಲ್ ಧಾವನ್ ಅವರು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...