ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲು ನೀಡುತ್ತಿರುವ ಹಣ ತಾತ್ಕಾಲಿಕ ಅಷ್ಟೇ, ಮುಂದಿನ ದಿನಗಳಲ್ಲಿ ಅಕ್ಕಿ ಕೊಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ನಗದು ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ ಸಚಿವರು, 5 ಕೆಜಿ ಅಕ್ಕಿ ಬದಲು ಫಲಾನುಭವಿಗಳ ಖಾತೆಗೆ ಹಣ ನೀಡುತ್ತಿರುವುದು ತಾತ್ಕಾಲಿಕ ಅಷ್ಟೇ, ಮುಂದಿನ ದಿನಗಳಲ್ಲಿ ಪರ್ಯಾಯ ಮಾರ್ಗಗಳಿಂದ ಅಕ್ಕಿ ಖರೀದಿಸಿ ನೀಡಲಾಗುತ್ತದೆ ಎಂದರು.
ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿ ಜೊತೆಗೆ ಇನ್ನೂ 5 ಕೆಜಿ ಸೇರಿಸಿ 10 ಕೆಜಿ ನೀಡಲು ಉದ್ದೇಶಿಸಿದ್ದೇವು. ಆದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಲಿಲ್ಲ. ಹೀಗಾಗಿ 5 ಕೆಜಿ ಅಕ್ಕಿ ಬದಲು ಹಣ ವರ್ಗಾವಣೆ ಮಾಡಲಾಗುತ್ತಿದೆ. ಹಣ ನೀಡುತ್ತಿರುವುದು ತಾತ್ಕಾಲಿಕವಾಗಿದ್ದು, ಮುಂದೆ ಅಕ್ಕಿ ಕೊಡುತ್ತೇವೆ ಎಂದರು.