![](https://kannadadunia.com/wp-content/uploads/2024/01/a09729dd-b44f-40d2-850e-e394f5784604.jpg)
ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ತಂಡೆಲ್’ ಚಿತ್ರದ ವಿಡಿಯೋ ತುಣುಕೊಂದನ್ನು ಇಂದು ಗೀತಾ ಆರ್ಟ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ವಿಡಿಯೋ ಸಾಕಷ್ಟು ವೀಕ್ಷಣೆ ಪಡೆದಿದ್ದು, ನೋಡುಗರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.
ಚಂದೂ ಮೊಂಡೇಟಿ ನಿರ್ದೇಶನದ ಈ ಚಿತ್ರವನ್ನು ಗೀತಾ ಆರ್ಟ್ಸ್ ಬ್ಯಾನರ್ ನಡಿ ಬನ್ನಿ ವಾಸು ನಿರ್ಮಾಣ ಮಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ನವೀನ್ ಸಂಕಲನವಿದ್ದು, ಶಾಮ್ ದತ್ ಛಾಯಾಗ್ರಹಣವಿದೆ.