alex Certify BIG NEWS: ಗ್ಲೌಸ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; 6 ಜನರು ಸಜೀವದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ಲೌಸ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; 6 ಜನರು ಸಜೀವದಹನ

ಮುಂಬೈ: ಗ್ಲೌಸ್ ತಯಾರಿಕಾ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಬಾಜಿ ನಗರದಲ್ಲಿ ನಡೆದಿದೆ.

ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯಲ್ಲಿ ಈ ದುರಂತ ಸಂಭವಿಸಿದೆ. ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು, 6 ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ 10-15 ಜನ ಕಾರ್ಮಿಕರು ಕಟ್ಟಡದ ಒಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವರನ್ನು ರಕ್ಷಿಸಿದ್ದಾರೆ. ಆದರೆ 6 ಜನರು ಮೃತಪಟ್ಟಿದ್ದಾರೆ. ಸದ್ಯ ಕಟ್ಟಡದಲ್ಲಿ ಬೆಂಕಿ ತಹಬದಿಗೆ ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...