alex Certify ಉಪ್ಪು ತಿಂದವರು ನೀರು ಕುಡೀಬೇಕು…ಸ್ನೇಹಿತ ಮಾಡಾಳ್ ವಿರುದ್ಧವೇ ಸಂಸದ ಸಿದ್ಧೇಶ್ವರ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ್ಪು ತಿಂದವರು ನೀರು ಕುಡೀಬೇಕು…ಸ್ನೇಹಿತ ಮಾಡಾಳ್ ವಿರುದ್ಧವೇ ಸಂಸದ ಸಿದ್ಧೇಶ್ವರ್ ವಾಗ್ದಾಳಿ

ದಾವಣಗೆರೆ: ಉಪ್ಪು ತಿಂದವರು ನೀರು ಕುಡಿಯಬೇಕು, ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು ಎಂದು ಸ್ನೇಹಿತ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧವೇ ದಾವಣಗೆರೆ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಬಿಜೆಪಿ ಸರ್ಕಾರವೇ ಲೋಕಾಯುಕ್ತ ಮರುಸ್ಥಾಪನೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಲೋಕಾಯುಕ್ತ ತೆಗೆದು ಎಸಿಬಿ ರಚನೆ ಮಾಡಿತ್ತು. ಆದರೆ, ನಮ್ಮ ಸರ್ಕಾರ ಬಂದ ನಂತರ ಲೋಕಾಯುಕ್ತವನ್ನು ಮರು ಸ್ಥಾಪಿಸಿದೆ, ಯಾರೇ ತಪ್ಪು ಮಾಡಿದ್ದರೂ ಅವರಿಗೆ ಶಿಕ್ಷೆ ಆಗಬೇಕು ಎಂದು ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ ಬಗ್ಗೆ ಸಿದ್ದೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...