ವಾರಣಾಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಬಹಿರಂಗಪಡಿಸೋದಕ್ಕೆ ಕೋರ್ಟ್ ಸಮ್ಮತಿ ನೀಡಿದೆ.
ಹಿಂದೂ ಮತ್ತು ಮುಸ್ಲಿಂ ಕಡೆಯವರಿಗೆ ಲಭ್ಯವಾಗುವಂತೆ ಮಾಡಲು ವಾರಣಾಸಿ ಜಿಲ್ಲಾ ನ್ಯಾಯಾಲಯ ಬುಧವಾರ ಒಪ್ಪಿಕೊಂಡಿದೆ.
ಜ್ಞಾನವಾಪಿ ಮಸೀದಿ ಸಂಕೀರ್ಣದ ಬಗ್ಗೆ ಭಾರತೀಯ ಪುರಾತತ್ವ ಸಮೀಕ್ಷೆಯು ಡಿಸೆಂಬರ್ 18 ರಂದು ಮುಚ್ಚಿದ ಲಕೋಟೆಯಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.
ಹಿಂದೂ ಕಡೆಯವರನ್ನು ಪ್ರತಿನಿಧಿಸುವ ವಕೀಲ ವಿಷ್ಣು ಶಂಕರ್ ಜೈನ್ ಮಾತನಾಡಿ “ಇಂದು, ನ್ಯಾಯಾಲಯವು ಎರಡೂ ಕಡೆಯ ವಾದಗಳನ್ನು ಆಲಿಸಿತು ಮತ್ತು ಎಎಸ್ಐ ವರದಿಯ ಹಾರ್ಡ್ ಕಾಪಿಯನ್ನು ಎರಡೂ ಕಡೆಯವರಿಗೆ ನೀಡಲಾಗುವುದು ಎಂದು ಒಮ್ಮತಕ್ಕೆ ಬರಲಾಯಿತು… ಇಮೇಲ್ ಮೂಲಕ ವರದಿ ನೀಡಲು ಎಎಸ್ಐ ಆಕ್ಷೇಪ ವ್ಯಕ್ತಪಡಿಸಿತು. ಆದ್ದರಿಂದ, ವರದಿಯ ಹಾರ್ಡ್ ಕಾಪಿ ಪಡೆಯಲು ಎರಡೂ ಕಡೆಯವರು ಒಪ್ಪಿಕೊಂಡರು ಎಂದರು.