
ಶಿವಮೊಗ್ಗ: ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಸಾಗರದ ಕಾಗೋಡು ತಿಮ್ಮಪ್ಪ ಬಡಾವಣೆ ಸಮೀಪ ಅಬಕಾರಿ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ವಿಶ್ವನಾಥ್ ಬಂದಿತ ಆರೋಪಿ. ಈತ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಮಾಹಿತಿ ಕಲೆಹಾಕಿದ ಅಬಕಾರಿ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಆರೋಪಿಯಿಂದ 138.06 ಲೀಟರ್ ಗೋವಾ ಮದ್ಯ, ಮದ್ಯ ಸಾಗಿಸಲು ಬಳಸಿದ್ದ ಕಾರ್ ವಶಕ್ಕೆ ಪಡೆಯಲಾಗಿದೆ. ಅಬಕಾರಿ ಡಿವೈಎಸ್ಪಿ ಶೀಲಾ ದರ್ಜಕರ್, ಇನ್ಸ್ಪೆಕ್ಟರ್ ಭಾಗ್ಯಲಕ್ಷ್ಮಿ, ಸಂದೀಪ್ ಎಲ್.ಸಿ., ಸಿಬ್ಬಂದಿ ಗುರುಮೂರ್ತಿ, ದೀಪಕ್, ಮಲ್ಲಿಕಾರ್ಜುನ, ಸಚಿನ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು,