ಪಣಜಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಗೋವಾ ಪೊಲೀಸರು ಶನಿವಾರ ಕರ್ನಾಟಕದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು.
ವಾಲ್ಪೋಯ್ ಪೊಲೀಸರು ಗೋವಾ ಮಕ್ಕಳ ಕಾಯ್ದೆ, ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಬಾಲಕಿಯ ಪೋಷಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದು, ನಂತರ ಆತ ಭೂಗತನಾಗಿದ್ದ. ಆ ವ್ಯಕ್ತಿ ಅಪ್ರಾಪ್ತ ಬಾಲಕಿಯೊಂದಿಗೆ ಸ್ನೇಹ ಬೆಳೆಸಿ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದಾನೆ.
ಪೊಲೀಸರು ಆರೋಪಿಯನ್ನು ಕರ್ನಾಟಕದ ಗದಗದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಗದಗದಲ್ಲಿ ಬಂಧಿಸಿ ಗೋವಾಕ್ಕೆ ಆರೋಪಿ ಕರೆತರಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.